ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಮತ್ತು ರಾಜಾ ರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್ ಮೋಹನ್ ರಾಯ್ ಅವರ ಜನ್ಮ ದಿನೋತ್ಸವ ಪ್ರಯುಕ್ತ ಮಹಿಳಾ ಸಬಲೀಕರಣದ ಕುರಿತು ವಿದ್ಯಾರ್ಥಿಗಳಿಂದ ಜಾಥಾ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಡಿಜಿಟಲ್ ಸದಸ್ಯತ್ವ ಅಭಿಯಾನ ಉತ್ತಮ ಸಿಬ್ಬಂದಿ/ ಉತ್ತಮ ಓದುಗ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಮಂಗಳವಾರ ನಡೆಯಿತು.
ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಚಾಲನೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಉದ್ಘಾಟಿಸಿದರು.
ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಮಹಿಳಾ ಸಬಲೀಕರಣ ಕುರಿತು ಮತ್ತು ಸಾಹಿತಿ ಹಾಗೂ ಕಂಬದಕೋಣೆಯ ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸುಬ್ರಹ್ಮಣ್ಯ ಭಟ್ ಆಧುನಿಕ ಭಾರತದ ಪಿತಾಮಹ ರಾಜಾರಾಮ್ ಮೋಹನ್ ರಾಯ್ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಉಪಸ್ಥಿತರಿದ್ದರು. ಉತ್ತಮ ಸೇವಾ ಮತ್ತು ಉತ್ತಮ ಓದುಗ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಸ್ವಾಗತಿಸಿದರು, ನಮಿತಾ ಬಿ ನಿರೂಪಿಸಿದರು, ಶಂಕುತಲಾ ಕುಂದರ್ ವಂದಿಸಿದರು.