Monday, November 11, 2024
Monday, November 11, 2024

ತೆಂಕನಿಡಿಯೂರು- ಗ್ರಂಥಾಲಯ ಸಪ್ತಾಹ

ತೆಂಕನಿಡಿಯೂರು- ಗ್ರಂಥಾಲಯ ಸಪ್ತಾಹ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಗ್ರಂಥಾಲಯ ಮಾಹಿತಿ ಮತ್ತು ಕೇಂದ್ರ ವಿಭಾಗದಿಂದ ಗ್ರಂಥಾಲಯ ಸಪ್ತಾಹದ ಉದ್ಘಾಟನೆ ನಡೆಯಿತು. ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾದ ಕೃಷ್ಣ ಭಟ್ ಉದ್ಘಾಟನೆ ನೆರವೇರಿಸಿದರು.

ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಭಳಕೆ ಮಾಡಿದಲ್ಲಿ ಖಂಡಿತ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬಲ್ಲರು. ಇಂದಿನ ಡಿಜಿಟಲ್ ಯುಗದಲ್ಲಿ ಇ-ರಿಸೋರ್ಸಸ್ ಬಳಕೆಯು ವಿದ್ಯಾರ್ಥಿಗಳಲ್ಲಿ ಕೌಶಲಗಳನ್ನು ಬೆಳೆಸಿ ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥರನ್ನಾಗಿಸುತ್ತದೆ. ವಿದ್ಯಾರ್ಥಿಗಳನ್ನು ಗ್ರಂಥಾಲಯ ಕಡೆ ಮುಖ ಮಾಡುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಮಾತನಾಡಿ, ಕಾರ್ಲ್ಮಾರ್ಕ್ಸ್, ಅಂಬೇಡ್ಕರ್ ರಂತಹ ಮಹಾಶಯರು ಗ್ರಂಥಾಲಯಲ್ಲಿ ಹೆಚ್ಚು ಸಮಯ ಕಳೆದು ಜ್ಞಾನ ಸಂಪಾದಿಸಿ ಸಮುದಾಯದ ಏಳಿಗೆಗೆ ನೀಡಿದ ಕೊಡುಗೆಯುನ್ನು ಸ್ಮರಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಕಾರ್ಯಕ್ರಮ ಆಯೋಜಿಸಿ ಸಪ್ತಾಹದ ಸರಣಿ ಕಾರ್ಯಕ್ರಮದ ವಿವರಣೆ ನೀಡಿದರು.

ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಶಾಂತ ಎನ್. ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಕವಿ ಕುವೆಂಪುರವರ ಕೃತಿಗಳ ಪುಸ್ತಕ ಪ್ರದರ್ಶನವನ್ನು ಗ್ರಂಥಾಲಯದಲ್ಲಿ ಏರ್ಪಡಿಸಲಾಯಿತು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಆಚಾರ್ಯ ಎಳ್ಳಂಪಳ್ಳಿ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಇನ್ನಿತರರು ವೀಕ್ಷಿಸಿದರು.

ಸಪ್ತಾಹದ ಅಂಗವಾಗಿ ನಿಘಂಟುಗಳು, ವಿಶ್ವಕೋಶ, ಇಂಗ್ಲೀಷ್ ಸಾಹಿತ್ಯ ಕೃತಿಗಳು, ಜನಪದ ಸಾಹಿತ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಜೊತೆಗೆ ಏಳು ದಿನಗಳು ಕೂಡಾ ವಿವಿಧ ವಿಷಯಗಳ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಈ ಸಪ್ತಾಹದಲ್ಲಿ ಬೋಧಕ/ಬೋಧಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ನವದೆಹಲಿ, ನ.11: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51...

ಸುಧಾರಿತ ಟೈಲರಿಂಗ್ ಮತ್ತು ಫ್ಯಾಷನ್ ಬ್ಲೌಸ್ ತರಬೇತಿ

ಉಡುಪಿ, ನ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ, ನ.11: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು...

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ನ.11: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ...
error: Content is protected !!