Sunday, September 22, 2024
Sunday, September 22, 2024

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ

Date:

ಉಡುಪಿ: ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಗುರುವಾರ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪೊಲೀಸರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದರ ಜೊತೆಗೆ ಒತ್ತಡ ರಹಿತ, ಆರೋಗ್ಯಕರ ಜೀವ ನಡೆಸಲು ಸಾಧ್ಯವಾಗಲಿದೆ. ಅಲ್ಲದೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ಈ ಬಾರಿಯ ಕ್ರೀಡಾಕೂಟದಲ್ಲಿ 50 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಿರುವುದರ ಜೊತೆಗೆ ಪೊಲೀಸ್ ಅಪರಾಧ ಪತ್ತೆ ವಿಭಾಗ ಮತ್ತು ಡಿಎಆರ್ ಸಿಬ್ಬಂದಿಗಳಿಗೆ ವಿಶೇಷ ಸ್ಪರ್ಧೆ ಹಾಗೂ ಕೆಸರುಗದ್ದೆ ಓಟದಂತಹ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿದೆ. ಈ ಕ್ರೀಡಾಕೂಟದ ಮೂಲಕ ಪೊಲೀಸ್ ಸಿಬ್ಬಂದಿ ತಮ್ಮ ಒತ್ತಡವನ್ನು ಮರೆತು, ಕ್ರೀಡಾ ಸ್ಪೂರ್ತಿಯಿಂದ ಹಾಗೂ ಹೆಚ್ಚಿನ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದರು. ಕ್ರೀಡಾ ತಂಡಗಳಿಂದ ಪಥ ಸಂಚಲನ, ವಂದನೆ ಸ್ವೀಕಾರ ನಡೆಯಿತು.

ಡಿಎಆರ್ ನ ಜೀವನ್ ಕ್ರೀಡಾಜ್ಯೋತಿಯೊಂದಿಗೆ ಆಗಮಿಸಿದರು. ಡಿಎಆರ್ ಸಬ್ ಇನ್ಸ್ಪೆಕ್ಟರ್ ಅದರ್ಶ ದೇವಣ್ಣ ನಾಯಕ ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಸ್ವಾಗತಿಸಿ, ಸಿದ್ದಲಿಂಗಪ್ಪ ವಂದಿಸಿದರು. ಎಎಸ್ಪಿ ಸೆನ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ನಿರೂಪಿಸಿದರು. ಉಡುಪಿ, ಕಾರ್ಕಳ, ಕುಂದಾಪುರ, ಡಿ.ಎ.ಆರ್, ಮಹಿಳಾ ಪೊಲೀಸ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!