ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಗರದ ಕೆ.ಎಂ ಮಾರ್ಗದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ, ಸಾರ್ವಜನಿಕ ಓದುಗರಿಗಾಗಿ ಪುಸ್ತಕ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ನಡೆಯಿತು.
ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ವಸಂತಿ ಶೆಟ್ಟಿ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥಾಲಯ ಪಿತಾಮಹ ಎಸ್.ಆರ್ ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಅವರ ವ್ಯಕ್ತಿತ್ವ, ಸರಳಜೀವನ ಹಾಗೂ ಅವರ ಜ್ಞಾನಾರ್ಜನೆ ಎಲ್ಲರಿಗೂ ಪ್ರೇರಣೆ ನೀಡುವಂತಾಗಲಿ ಎಂದರು. ಗ್ರಂಥಾಲಯದಲ್ಲಿನ ಅತ್ಯಮೂಲ್ಯ ಸಾಹಿತ್ಯ ಭಂಡಾರದ ಸದುಪಯೋಗವನ್ನು ಪಡೆದು ಎಲ್ಲರೂ ಶ್ರೇಷ್ಠ ವ್ಯಕ್ತಿಗಳಾಗುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಂಥಪಾಲಕಿ ರಂಜಿತಾ ಸಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿ, ಗ್ರಂಥಾಲಯ ಸಹಾಯಕಿ ಸುನೀತ ಬಿ.ಎಸ್ ವಂದಿಸಿದರು. ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ ನಿರೂಪಿಸಿದರು.