ಬೆಂಗಳೂರು: ರೂ. 397 ಕೋಟಿ ವೆಚ್ಚದಲ್ಲಿ ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು ಹಾಗೂ 158 ಕೋಟಿ ರೂ. ವೆಚ್ಚದಲ್ಲಿ 7 ತಾಯಿ ಹಾಗೂ ಮಕ್ಕಳ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆಯುಷ್ಮಾನ್ ಯೋಜನೆ ಅಡಿಯಲ್ಲಿ ತೀರ್ವ ನಿಗಾ ಘಟಕ ಸ್ಥಾಪಿಸಲಾಗುತ್ತದೆ. ತುಮಕೂರಿನ ಜಿಲ್ಲಾಸ್ಪತ್ರೆಯನ್ನು ಕೂಡ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.