ಮಂಗಳೂರು: ಶನಿವಾರ ಮಂಗಳೂರಿನ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು, ಸ್ಫೋಟ ಆಕಸ್ಮಿಕವಲ್ಲ. ಇದು ಗಂಭೀರ ಹಾನಿ ಉಂಟುಮಾಡಲೆಂದೇ ನಡೆದ ‘ಆಕ್ಟ್ ಆಫ್ ಟೆರರ್’ ಆಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಂಗಳೂರಿನ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಶನಿವಾರ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದರು.