ಬ್ರಹ್ಮಾವರ: ಶ್ರೀ ಕ್ಷೇತ್ರ ನೀಲಾವರ ಇದರ ಶ್ರೀ ಮಹಿಷಮರ್ದಿನಿ ದಶಾವತಾರ ಯಕ್ಷಗಾನ ಮಂಡಳಿಯ 13 ನೇ ವರ್ಷದ ದೇವರ ಸೇವೆಯಾಟ ಹಾಗೂ ತಿರುಗಾಟಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಯಕ್ಷಗಾನ ಕಲಾವಿದರಾದ ಎಂ.ಎ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್. ರಘುರಾಮ್ ಮಧ್ಯಸ್ಥ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ರಾಜ್ಯ ಎಸ್. ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಮಣಿಪಾಲ ಎಂ.ಐ.ಟಿ ಪ್ರಾಧ್ಯಾಪಕ ಎಸ್.ವಿ ಉದಯಕುಮಾರ್ ಶೆಟ್ಟಿ, ಶ್ರೀ ಕ್ಷೇತ್ರ ನೀಲಾವರದ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಶೆಟ್ಟಿ, ಮೇಳದ ಸಂಚಾಲಕರಾದ ರಮೇಶ್ ಪೂಜಾರಿ ಹಾಗೂ ವ್ಯವಸ್ಥಾಪಕ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.