ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ನೆಲ, ಜಲ, ಗಡಿ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಯಾರೂ ಕೂಡ ರಾಜ್ಯದ ಜಾಗ ಪಡೆಯುತ್ತೇವೆ ಎಂಬ ಹಗಲುಗನಸು ಕಾಣುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದು, ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವ ಆಗ್ರಹವಿದೆ. ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದಿದ್ದಾರೆ.
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.