Sunday, September 22, 2024
Sunday, September 22, 2024

ಶಿಕ್ಷಣದ ಜೊತೆಗೆ ಕ್ರೀಡೆಯೂ ಮುಖ್ಯ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು

ಶಿಕ್ಷಣದ ಜೊತೆಗೆ ಕ್ರೀಡೆಯೂ ಮುಖ್ಯ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು

Date:

ಕುಂದಾಪುರ: ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯು. ಸುಧಾ ಪ್ರಭು ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯೂ ಪ್ರಮುಖವಾಗಿದೆ ಎಂದು ಕ್ರೀಡೆಯ ಮಹತ್ವವನ್ನು ವಿವರಿಸಿದರು.

ಕ್ರೀಡಾಕೂಟದ ಉದ್ಘಾಟಕರಾಗಿ ವಿ.ಕೆ.ಆರ್ ಹೈಸ್ಕೂಲ್ ನ 10ನೇ ತರಗತಿಯ ವಿದ್ಯಾರ್ಥಿನಿ, ಕರಾಟೆಯಲ್ಲಿ ಚಿನ್ನದ ಪದಕ ಪಡೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನವಮಿ ಎಸ್ ಶೆಟ್ಟಿ ವೇದಿಕೆಯಲ್ಲಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಕಿಂಡರ್ಗಾಟನ್ ನ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಉಪಸ್ಥಿತರಿದ್ದರು.

ಶಿಕ್ಷಕಿ ಕವಿತಾ ಪಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ ಸಹಯೋಗದೊಂದಿಗೆ ಕ್ರೀಡಾಕೂಟ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!