ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ 2022-23 ರಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.
ಸಂಸ್ಥೆಯ ಸಂಗೀತ ಶಿಕ್ಷಕ ಪ್ರಕಾಶ್ ಪ್ರೌಢಶಾಲಾ ಹಂತದ ಗಾಯನ ಸ್ಪರ್ಧೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಪ್ರಾಥಮಿಕ ಹಂತದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್., ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ವಿಜೇತ ಶಿಕ್ಷಕರನ್ನು ಅಭಿನಂದಿಸಿದ್ದಾರೆ.