ಬೆಂಗಳೂರು: ರಾಜ್ಯದಲ್ಲಿ ಟೊಮೆಟೊ ಮತ್ತು ಈರುಳ್ಳಿ ಬೆಲೆಯಲ್ಲಿ ಕುಸಿತವಾಗಿರುವ ವಿಚಾರ ಬೆಳೆಗಾರರ ತಲೆನೋವಿಗೆ ಕಾರಣವಾಗಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಾದ ಬಂಪರ್ ಫಸಲು ಬೆಲೆ ಕುಸಿತಕ್ಕೆ ಕಾರಣವಾಗಿದೆ.
ಈ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಈರುಳ್ಳಿ, ಟೊಮೆಟೊ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದು ಕೋಲಾರ ಜಿಲ್ಲಾ ಹಣ್ಣು ತರಕಾರಿ ಬೆಳೆಗಾರರ ಹೋರಾಟ ಸಮಿತಿ ಆಗ್ರಹಿಸಿದೆ.
ಕೆಲವು ದಿನಗಳ ಹಿಂದೆ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಯಿಂದ 10 ರೂಪಾಯಿಗೆ ಕುಸಿದಿತ್ತು. ಆದರೆ, ಈಗ ಉತ್ಪನ್ನದ ಗುಣಮಟ್ಟಕ್ಕೆ ಅನುಗುಣವಾಗಿ ಪ್ರತಿ ಕೆಜಿಗೆ 12 ರೂಪಾಯಿಯಿಂದ 18 ರೂಪಾಯಿವರೆಗೆ ಏರಿಕೆಯಾಗಿದೆ.