ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಶಾಲೆಗಳಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಗಾರ ನಡೆಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ಸುಪರಿಂಟೆಂಡೆಂಟ್ ಡಾ. ಸೋನಿ ಆಗಮಿಸಿ, ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡಿದರು. ಅಪಘಾತ, ಹೃದಯಸ್ತಂಭನ ಮುಂತಾದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗುವ ಪೂರ್ವದಲ್ಲಿ ಹೇಗೆ ಜೀವವನ್ನು ರಕ್ಷಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಕಿಂಡರ್ ಗಾರ್ಟನ್ ನ ಮುಖ್ಯ ಶಿಕ್ಷಕಿ ಲತಾ ಜಿ.ಭಟ್, ಶಿಕ್ಷಕ ಸಂಯೋಜಕಿ ಆರತಿ ಶೆಟ್ಟಿ ಮತ್ತು ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ದೀಪಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.