Sunday, September 22, 2024
Sunday, September 22, 2024

ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಕಾಪಾಡಿ: ಉಸ್ತುವಾರಿ ಸಚಿವ ಎಸ್.ಅಂಗಾರ

ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಕಾಪಾಡಿ: ಉಸ್ತುವಾರಿ ಸಚಿವ ಎಸ್.ಅಂಗಾರ

Date:

ಉಡುಪಿ: ಜಿಲ್ಲೆಯ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು.

ಅವರು ಶನಿವಾರ ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹಣೆ ಮಾಡುವ ವಿಚಾರದ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ: ಸುರತ್ಕಲ್ ಟೋಲ್ ಪ್ಲಾಜಾವನ್ನು ರದ್ದುಪಡಿಸಿ ಅದರ ದರಗಳನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿ ಪರಿಷ್ಕೃತ ದರಗಳನ್ನು ಪಡೆಯುವ ಕುರಿತಂತೆ ಜಿಲ್ಲಾಡಳಿತದ ಮತ್ತು ಜನಪ್ರತಿನಿಧಿಗಳ ಯಾವುದೇ ಅಭಿಪ್ರಾಯಗಳನ್ನು ಕೇಳದೇ ಏಕಮುಖವಾಗಿ ನಿರ್ಧರಿಸಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಟೋಲ್ ದರ ಹೆಚ್ಚಳ ಕುರಿತಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದು, ಅಲ್ಲಿಯವರೆಗೆ ಯಥಾಸ್ಥಿತಿಯಲ್ಲಿ ಹಿಂದಿನ ದರದಲ್ಲಿಯೇ ವಾಹನಗಳಿಂದ ಶುಲ್ಕವನ್ನು ಪಡೆಯುವಂತೆ ಸೂಚನೆ ನೀಡಿದರು.

ಉಡುಪಿ ಜಿಲ್ಲೆಯ ವಾಹನಗಳಿಗೆ ಹಿಂದಿನಂತೆಯೇ ನಿಗದಿತ ದರಗಳನ್ನು ಪಡೆಯುವಂತೆ, ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡುವಂತೆ ಹಾಗೂ ಸುರತ್ಕಲ್‌ನಲ್ಲಿ ಸ್ಥಳೀಯ ವಾಹನಗಳಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಉಡುಪಿ ಜಿಲ್ಲೆಯ ವಾಹನಗಳಿಗೆ ನೀಡುವಂತೆ ಸಚಿವ ಸುನೀಲ್ ಕುಮಾರ್ ಹಾಗೂ ಶಾಸಕ ರಘುಪತಿ ಭಟ್ ತಿಳಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!