ಬೆಂಗಳೂರು: ರಾಜ್ಯದ ಒಟ್ಟು 438 ಕಡೆಗಳಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ‘ನಮ್ಮ ಕ್ಲಿನಿಕ್’ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 108 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 100 ‘ನಮ್ಮ ಕ್ಲಿನಿಕ್’ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ.
‘ನಮ್ಮ ಕ್ಲಿನಿಕ್’ ಹೇಗಿರಲಿದೆ? ನಮ್ಮ ಕ್ಲಿನಿಕ್ ಗಳು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸುತ್ತಿವೆ. ‘ನಮ್ಮ ಕ್ಲಿನಿಕ್’ ಗಳಲ್ಲಿ ತಲಾ ಒಂದು ವೈದ್ಯರು, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಕ್ಲಿನಿಕ್ ಗಳಲ್ಲಿ ತಪಾಸಣೆ ಬಳಿಕ, ಉಚಿತ ಔಷಧ ವಿತರಣೆ ಮಾಡಲಾಗುವುದು.