ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಐತಿಹಾಸಿಕ ಧಾರ್ವಿುಕ ತಾಣವಾದ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದುಗಳಿಗೆ ಅವಕಾಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಹಾಗೂ ಶೃಂಗೇರಿ ಮೂಲದ ಶ್ರೀಕಾಂತ್ ಎಂಬ ಅರ್ಚಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇನಾಂ ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕವಾದ ಬೆನ್ನಲ್ಲೇ ವಿಎಚ್ಪಿ, ಬಜರಂಗದಳ, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.