ಉಡುಪಿ: ಉಡುಪಿ ಶ್ರೀ ಕೃಷ್ಣ ಬಾಲನಿಕೇತನಕ್ಕೆ ರಾಜ್ಯ ಉಪಲೋಕಾಯುಕ್ತ ಫಣೀಂದ್ರ ಭೇಟಿ ನೀಡಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಸಂಸ್ಥಾಪಿತವಾದ ಈ ಸಂಸ್ಥೆಯಲ್ಲಿರುವ ಮಕ್ಕಳು ಉತ್ತಮ ರೀತಿಯಲ್ಲಿ ಕಲಿತು ತಮ್ಮ ಭವಿಷ್ಯ ರೂಪಿಸುವಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದು ಅದರ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ., ಸಂಸ್ಥೆಯ ಉಪಾಧ್ಯಕ್ಷ ಕಮಲಾಕ್ಷ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ಸದಸ್ಯರಾದ ರಾಘವೇಂದ್ರ ರಾವ್, ಮಟ್ಟು ಲಕ್ಷ್ಮೀನಾರಾಯಣ ರಾವ್, ಗುರುರಾಜ ಭಟ್, ಸುಹಾನಿ ಕಾಮತ್ ಮುಂತಾದವರು ಉಪಸ್ಥಿತರಿದ್ದರು.