ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ http://www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.