ಉಡುಪಿ: ಶಂಕರನಾರಾಯಣ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆದುಳು ಜ್ವರದ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರೂಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರನಾರಾಯಣ ಶ್ರೀ ವೀರ ಕಲ್ಲುಕುಟಿಕ ದೈವಸ್ಥಾನದ ಮೊಕ್ತೇಸರರಾದ ಮಂಜುನಾಥ ಶೇಟ್ ಮಾತನಾಡಿ, ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದ್ದು, ಮಕ್ಕಳಿಗೆ ಬಾಲ್ಯದಿಂದಲೇ ಆರೋಗ್ಯವನ್ನು ಕಾಪಾಡುವಲ್ಲಿ ಅರಿವು ಮೂಡಿಸಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಎಸ್.ಎನ್.ಇ. ಟ್ರಸ್ಟ್ ಅಧ್ಯಕ್ಷರು ಮತ್ತು ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಪೋಷಕರು ಉಪಸ್ಥಿತರಿದ್ದರು.