ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆಯಾಗಿದೆ. ಐದು ವರ್ಷದ ಹೆಣ್ಣು ಮಗುವಿನಲ್ಲಿ ಝೀಕಾ ಪತ್ತೆಯಾಗಿದೆ.
ಮೊದಲ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ನೆರೆ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ ನೀಡಿದ್ದಾರೆ.
ರಾಯಚೂರಿನ ಮಗುವಿನ ಮೇಲೆ ನಿಗಾ ಇಡಲಾಗಿದೆ. 5 ವರ್ಷದ ಬಾಲಕಿಯಲ್ಲಿ ಝೀಕಾ ಪತ್ತೆಯಾಗಿದ್ದು, ರಾಯಚೂರು ಸುತ್ತಮುತ್ತಲ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ಕಟ್ಟೆಚ್ಚರ ವಹಿಸಬೇಕು. ಈ ಬಗ್ಗೆ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.
ಹೇಗೆ ಹರಡುತ್ತದೆ?
ಝೀಕಾ ವೈರಸ್ ಏಡೀಸ್ ಸೊಳ್ಳೆಗಳಿಂದ ಹರಡುತ್ತದೆ. ಏಡೀಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕ್ರಿಯಾಶೀಲವಾಗಿರುತ್ತವೆ. ಈ ರೋಗದ ಲಕ್ಷಣಗಳು ತಕ್ಷಣಕ್ಕೆ ಗೊತ್ತಾಗುವುದಿಲ್ಲ.