Monday, November 25, 2024
Monday, November 25, 2024

ನಮ್ಮ ಕ್ಲಿನಿಕ್ ಜನಸ್ನೇಹಿ, ಜನ ಉಪಯೋಗಿ ಆರೋಗ್ಯ ಸೇವೆ ಒದಗಿಸಬೇಕು: ಸುಮಿತ್ರಾ ಆರ್ ನಾಯಕ್

ನಮ್ಮ ಕ್ಲಿನಿಕ್ ಜನಸ್ನೇಹಿ, ಜನ ಉಪಯೋಗಿ ಆರೋಗ್ಯ ಸೇವೆ ಒದಗಿಸಬೇಕು: ಸುಮಿತ್ರಾ ಆರ್ ನಾಯಕ್

Date:

ಉಡುಪಿ: ನಮ್ಮ ಕ್ಲಿನಿಕ್ ಜನಸ್ನೇಹಿ, ಜನ ಉಪಯೋಗಿ ಆರೋಗ್ಯ ಸೇವೆ ಒದಗಿಸಬೇಕು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡಜನರು ಒಳಗೊಂಡಂತೆ ಎಲ್ಲರಿಗೂ ಆರೋಗ್ಯ ಸೇವೆಯನ್ನು ಸರಳವಾಗಿ ಪಡೆಯಲು ಅನುಕೂಲವಾಗುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು.

ಅವರು ಬುಧವಾರ ಬೀಡನಗುಡ್ಡೆಯಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ನಡೆದ ನಮ್ಮ ಕ್ಲಿನಿಕ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನೆಲೆಸಿರುವ ಬಡ ಮತ್ತು ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರಿಗೆ ಅತ್ಯಂತ ಅಗತ್ಯವಿರುವ 13 ವಿವಿಧ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು. ಇದರಿಂದ ಬಡ ಮತ್ತು ವಲಸೆ ಕಾರ್ಮಿಕರು ತಾವು ವಾಸಿಸುವ ಪ್ರದೇಶದಲ್ಲಿಯೇ ಉತ್ತಮ ಗುಣಮಟ್ಟದ ಉಚಿತ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗಲಿದ್ದು, ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಶುಲ್ಕ ನೀಡುವುದು ತಪ್ಪಲಿದೆ. ನಗರ ಪ್ರದೇಶದ ಸಾರ್ವಜನಿಕರೂ ಸಹ ಈ ಕ್ಲಿನಿಕ್‌ಗಳ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, 20,000 ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿ ಉಡುಪಿಯಲ್ಲಿ 3, ಕುಂದಾಪುರದಲ್ಲಿ 2 ಹಾಗೂ ಕಾರ್ಕಳದಲ್ಲಿ 1 ಸೇರಿದಂತೆ ಒಟು 6 ಕ್ಲಿನಿಕ್ ಆರಂಭಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಗೆ ತಮ್ಮ ವಾಸಸ್ಥಳದ ಸಮೀಪದಲ್ಲಿಯೇ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದರು.

ನಮ್ಮ ಕ್ಲಿನಿಕ್ ಅನ್ನು ಸಾರ್ವಜನಿಕರು ನನ್ನ ಕ್ಲಿನಿಕ್ ಎಂದು ಭಾವಿಸಿ, ಉಪಯೋಗ ಪಡೆದುಕೊಳ್ಳಬೇಕು ಎಂದ ಅವರು, ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಎಚ್ಚವಹಿಸಬೇಕೆಂದರು.

ನಗರಸಭಾ ಸದಸ್ಯ ಗಿರೀಶ್ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕೆಂಬ ಹಿನ್ನೆಲೆ, ನಮ್ಮ ಕ್ಲಿನಿಕ್ ಅನ್ನು ಸರ್ಕಾರ ಪ್ರಾರಂಭಿಸಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾದ್ಯಾಯ ವಂದಿಸಿದರು.

ನಗರಸಭಾ ವ್ಯಾಪ್ತಿಯ ನಿಟ್ಟೂರು ಹಾಗೂ ಕಕ್ಕುಂಜೆಯಲ್ಲಿಯೂ ಸಹ ನಮ್ಮ ಕ್ಲಿನಿಕ್‌ಗಳ ಉದ್ಘಾಟನೆಯನ್ನು ನಗರಸಭೆಯ ಅಧ್ಯಕ್ಷರು ಹಾಗೂ ಸ್ಥಳೀಯ ನಗರಸಭಾ ಸದಸ್ಯರುಗಳು ನೆರವೇರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!