Sunday, November 24, 2024
Sunday, November 24, 2024

ಸಹಕಾರ ರತ್ನ ಪ್ರಶಸ್ತಿ ಯಶ್‌ಪಾಲ್ ಸುವರ್ಣ ಸಾಧನೆಗೆ ಸಂದ ಗೌರವ: ಶ್ರೀ ರಾಜಶೇಖರಾನಂದ ಸ್ವಾಮೀಜಿ

ಸಹಕಾರ ರತ್ನ ಪ್ರಶಸ್ತಿ ಯಶ್‌ಪಾಲ್ ಸುವರ್ಣ ಸಾಧನೆಗೆ ಸಂದ ಗೌರವ: ಶ್ರೀ ರಾಜಶೇಖರಾನಂದ ಸ್ವಾಮೀಜಿ

Date:

ಹಿರಿಯಡ್ಕ: ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಹಿಂದುತ್ವದ ವಿಚಾರದಲ್ಲಿ ಗಟ್ಟಿ ಧ್ವನಿಯಾಗಿ ಸಹಕಾರ, ಮೀನುಗಾರಿಕೆ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮ ದಿಟ್ಟ ನಿರ್ಧಾರ, ನಾಯಕತ್ವ ಗುಣಗಳಿಂದ ಬೆಳದು ಬಂದ ಯಶ್‌ಪಾಲ್ ಸುವರ್ಣರವರನ್ನು ಅರಸಿ ಬಂದ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿ ಅವರ ಸಾಧನೆಗೆ ಸಂದ ಗೌರವವಾಗಿದ್ದು, ಮುಂದಿನ ದಿನದಲ್ಲಿ ಓರ್ವ ಜನಪ್ರತಿನಿಧಿಯಾಗಿ ಜನಸಾಮಾನ್ಯರ ಸೇವೆಗೆ ಅವಕಾಶ ಒದಗಿ ಬರಲಿ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಸಹಕಾರ ರತ್ನ ಯಶ್‌ಪಾಲ್ ಸುವರ್ಣ ಅಭಿನಂದನಾ ಸಮಿತಿ ಹಿರಿಯಡ್ಕ ವತಿಯಿಂದ ಆಯೋಜಿಸಿದ್ದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್‌ಪಾಲ್ ಸುವರ್ಣ ರವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ
ಆಶೀರ್ವಚಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಹಕಾರ ಕ್ಷೇತ್ರದ ಸಾಧನೆಗೆ ಅರ್ಹವಾಗಿಯೇ ಸಹಕಾರ ರತ್ನ ಗೌರವಕ್ಕೆ ಯಶ್‌ಪಾಲ್ ಸುವರ್ಣ ಭಾಜನರಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯವಾಗಿಯೂ ಉನ್ನತ ಸ್ಥಾನಮಾನ ಒಲಿದು ಬರಲಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯಶ್‌ಪಾಲ್ ಸುವರ್ಣ ಸಾಧನೆ ಸರ್ವರಿಗೂ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲೂ ಬಿಜೆಪಿ ಪಕ್ಷವನ್ನು ಸಂಘಟಿಸುವ ನೇತೃತ್ವ ಯಶ್‌ಪಾಲ್ ಸುವರ್ಣ ವಹಿಸಲಿ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಯಶ್‌ಪಾಲ್ ಸುವರ್ಣ, ಸಹಕಾರ ರತ್ನ ಪ್ರಶಸ್ತಿ ನನ್ನ ವೈಯುಕ್ತಿಕ ಸಾಧನೆಗಿಂತ ನನ್ನ ಅಧ್ಯಕ್ಷತೆಯ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಬ್ಯಾಂಕಿನ ಆಡಳಿತ ಮಂಡಳಿ, ಸದಸ್ಯರು, ಗ್ರಾಹಕರು, ಮಾರ್ಗದರ್ಶಕರು ಹಾಗೂ ಸಿಬ್ಬಂದಿಗಳ ಸಹಕಾರಕ್ಕೆ ಸಂದ ಗೌರವವಾಗಿದೆ. ಈ ಸನ್ಮಾನ ಇನ್ನೂ ಹೆಚ್ಚಿನ ಸಮಾಜಮುಖಿ್ ಕಾರ್ಯಗಳಿಗೆ ಪ್ರೇರಣೆ ನೀಡಿದೆ ಎಂದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಹಿರಿಯಡ್ಕ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಹೆಬ್ರಿ ಕೋಮಲ್ ಫೀಡ್ಸ್ನಆಡಳಿತ
ನಿರ್ದೇಶಕರಾದ ಸಿದ್ಧಿ ಪ್ರಸಾದ್ ಎಂ. ಶೆಣೈ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮರಾಠಿ ಕಲಾ ಸಂಘ, ರಾಜರಾಜೇಶ್ವರಿ ಕ್ರಿಕೆಟರ್ಸ್ ಅಂಜಾರ್, ಹಿಂದೂ ಯುವಸೇನೆ ಹಿರಿಯಡ್ಕ ಮತ್ತು ಭೈರಂಪಳ್ಳಿ ಶಾಖೆ, ಕೋಮಲ್ ಫೀಡ್ಸ್ ವತಿಯಿಂದ ಯಶ್‌ಪಾಲ್ ಸುವರ್ಣರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸಮಿತಿಯ ಸಂಚಾಲಕರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಶುಭಕರ ಶೆಟ್ಟಿ ಕಬಿಯಾಡಿ, ಸಂದೀಪ್ ಶೆಟ್ಟಿ ಬಡಗಬೆಟ್ಟು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಪ್ರದೀಪ್ ಶೆಟ್ಟಿ ಭೈರಂಪಳ್ಳಿ, ಸನತ್ ಶೆಟ್ಟಿ ಹಿರಿಯಡ್ಕ, ಅಶೋಕ್ ಶೆಟ್ಟಿ, ನಿತಿನ್ ಶೆಟ್ಟಿ, ವಿನಯ್ ಪೂಜಾರಿ, ಪ್ರಶಾಂತ್ ನಾಯ್ಕ್ ಅಂಜಾರು ಉಪಸ್ಥಿತರಿದ್ದರು, ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!