ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ಉಡುಪಿಯಲ್ಲಿ ನಡೆಯುವ ಅಟಲ್ ಉತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಬೂತ್ ಸಂಗಮ ಕಾರ್ಯಕ್ರಮ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರ ಚಪ್ಪರ ಮಹೂರ್ತ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು.
ಅಟಲ್ ಉತ್ಸವದಲ್ಲಿ ಡಿಸೆಂಬರ್ 24 ರಂದು ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪ್ರೋ ಕಬಡ್ಡಿ ಪಂದ್ಯಾಟ ಅಟಲ್ ಟ್ರೋಫಿ ಮತ್ತು ಡಿಸೆಂಬರ್ 25 ರಂದು ಬೂತ್ ಸಂಗಮ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕಾರ್ಯಕ್ರಮದ ಸಂಚಾಲಕರಾದ ಗಿರೀಶ್ ಅಂಚನ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಬೂತ್ ಉಸ್ತುವಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.