ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಉದ್ಯೋಗ ಮಾಹಿತಿ ಘಟಕ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಒಂದು ದಿನದ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ, ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳುವ ಮೂಲಕ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಹೊಸಕಾಲದ ಕಂಪನಿಗಳಿಗೆ ಅಗತ್ಯವಾದ ಹೊಸ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಬೆಳವಣಿಗೆ ಸಾಧಿಸಬೇಕೆಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೌಶಲ್ಯ ತರಬೇತುದಾರರಾದ ನವೀನ್ ಕುಮಾರ್ ಅವರು ಸ್ವವಿವರ ಬರೆಯುವ ಬಗ್ಗೆ, ಸಂದರ್ಶನ ಎದುರಿಸುವ ಬಗ್ಗೆ ಮತ್ತು ಗುಂಪು ಚರ್ಚೆಯ ಬಗ್ಗೆ ಸುದೀರ್ಘವಾಗಿ ಅಂತಿಮ ವರ್ಷದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತರಬೇತಿ ನೀಡಿದರು.
ಇದು ಸ್ಪರ್ಧಾತ್ಮಕ ಯುಗ. ಈ ಯುಗದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳು ಕೌಶಲ್ಯಗಳನ್ನು ಕಲಿತು ಅದನ್ನು ಉದ್ಯೋಗ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡರೆ ಮುಂದೆ ಬರಬಹುದೆಂದು ಸಲಹೆ ನೀಡಿದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು.
ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ ಸ್ವಾಗತಿಸಿ, ಡಾ. ಎಚ್.ಕೆ. ವೆಂಕಟೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.