ಉಡುಪಿ: ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತ ಅರಣ್ಯ ರಕ್ಷಕರು ಮತ್ತು ವೀಕ್ಷಕರು, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಡಿಸೆಂಬರ್ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿದಿಯೂರು ಹೋಟೆಲ್ನ ಶೇಷಶಯನ ಹಾಲ್ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ಎಂ ನಾಯಕ್, ಕೆ.ಸಿ.ಡಿ.ಸಿ ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಿಭಾಗೀಯ ವ್ಯವಸ್ಥಾಪಕ ಉದಯ್ ಕುಮಾರ್ ಜೋಗಿ, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ತಾಂತ್ರಿಕ ಸಹಾಯಕ ಕ್ಲಿಫರ್ಡ್ ಲೋಬೋ, ಕುದುರೆಮುಖ ವನ್ಯಜೀವಿ ಉಪ ವಿಭಾಗದ ಕಾಜೋಲ್ ಅಜಿತ್ ಪಾಟೀಲ್, ಮೂಡಬಿದ್ರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್, ಉಡುಪಿ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ. ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಗೌರವಾಧ್ಯಕ್ಷ ಎಚ್. ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿರುವರು.