ಬೆಂಗಳೂರು: ನನಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ರಾಜ್ಯದ 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾರ್ಕಳ, ಜಮಖಂಡಿ, ತೇರದಾಳ, ಶೃಂಗೇರಿ ಮತ್ತು ಧಾರವಾಡ ನಗರ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುವುದಾಗಿ ಮುತಾಲಿಕ್ ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ 25 ಕ್ಷೇತ್ರಗಳಲ್ಲಿ ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.