Tuesday, November 26, 2024
Tuesday, November 26, 2024

ಮಹಾಲಕ್ಷ್ಮೀ ಬ್ಯಾಂಕ್ ನಿರಂತರ ಪ್ರಗತಿ ಅಭಿನಂದನೀಯ: ನಾಡೋಜ ಡಾ. ಜಿ. ಶಂಕರ್

ಮಹಾಲಕ್ಷ್ಮೀ ಬ್ಯಾಂಕ್ ನಿರಂತರ ಪ್ರಗತಿ ಅಭಿನಂದನೀಯ: ನಾಡೋಜ ಡಾ. ಜಿ. ಶಂಕರ್

Date:

ಬಾರ್ಕೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಯಶ್‌ಪಾಲ್ ಸುವರ್ಣರ ನೇತೃತ್ವದಲ್ಲಿ ನಿರಂತರ ಪ್ರಗತಿಯನ್ನು ಸಾಧಿಸಿ ಈ ಬಾರಿಯ ಅತ್ಯುತ್ತಮ ಪಟ್ಟಣ ಸಹಕಾರಿ ಪ್ರಶಸ್ತಿಗೆ ಭಾಜನರಾಗಿರುವುದು ಅಭಿನಂದನೀಯ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2023ನೇ ಸಾಲಿನ ಡೈರಿಯನ್ನು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಮಾತನಾಡಿ, ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಬ್ಯಾಂಕ್ ಉತ್ತಮ ಪ್ರಗತಿಯನ್ನು ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಮಾದರಿ ಸಹಕಾರಿ ಸಂಸ್ಥೆಯಾಗಿ ರೂಪಿಸಲು ಆಡಳಿತ ಮಂಡಳಿ ಕಾರ್ಯೋನ್ಮುಖವಾಗಿದೆ ಎಂದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮ ದೇವಸ್ಥಾನದ ಅಧ್ಯಕ್ಷರಾದ ಆನಂದ ಸಿ. ಕುಂದರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಹಿರಿಯಣ್ಣ ಕಿದಿಯೂರು, ಕೇಶವ ಕುಂದರ್, ಕಿಟ್ಟಪ್ಪ ಅಮೀನ್, ಸತೀಶ್ ಅಮೀನ್ ಬಾರ್ಕೂರು, ಬ್ಯಾಂಕಿನ ನಿರ್ದೇಶಕರಾದ ವಾಸುದೇವ ಸಾಲ್ಯಾನ್, ವನಜ ಪುತ್ರನ್, ವ್ಯವಸ್ಥಾಪನ ನಿರ್ದೇಶಕರಾದ ಜಗದೀಶ್ ಮೊಗವೀರ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕಾ ಕಿರಣ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!