Sunday, September 22, 2024
Sunday, September 22, 2024

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ

Date:

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಭಾಯಿ ಮೋದಿ ಕಾರು ಅಪಘಾತಕ್ಕೀಡಾದ ಘಟನೆ ಮೈಸೂರಿನಿಂದ 13 ಕಿಮೀ ದೂರದ ಕಡ್ಕೋಲಾ ಬಳಿ ಸಂಭವಿಸಿದೆ. ಘಟನೆಯಿಂದ ಪ್ರಹ್ಲಾದ್ ಭಾಯಿ ಮೋದಿ, ಪುತ್ರ, ಸೊಸೆ ಮತ್ತು ಮೊಮ್ಮಗ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಎಸ್.ಯು.ವಿ ಕಾರಿನ ಎದುರಿನ ಭಾಗ ನಜ್ಜುಗುಜ್ಜಾಗಿದೆ. ಪ್ರಹ್ಲಾದ್ ಭಾಯಿ ಮೋದಿ ಕುಟುಂಬ ಸದಸ್ಯರೊಂದಿಗೆ ಖಾಸಗಿ ಕಾರಿನಲ್ಲಿ ಬಂಡೀಪುರಕ್ಕೆ ತೆರಳುತ್ತಿದ್ದರು. ಸತ್ಯನಾರಾಯಣ ಎಂಬವರು ಕಾರನ್ನು ಚಲಾಯಿಸುತ್ತಿದ್ದರು. ಕಾರು ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಚಾಲಕ ಸಹಿತ ಎಲ್ಲರನ್ನೂ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದರು.

ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್: ಮಂಗಳವಾರ ಮಧ್ಯಾಹ್ನ ಮೈಸೂರು ಬಳಿ ರಸ್ತೆ ಅಪಘಾತಕ್ಕೀಡಾದ ಪ್ರಹ್ಲಾದಭಾಯಿ ಮೋದಿ ಕುಟುಂಬದವರ ಆರೋಗ್ಯವನ್ನು ವಿಚಾರಿಸಿದೆ. ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದೇನೆ, ಇವರೆಲ್ಲರೂ ಅಪಾಯದಿಂದ ಪಾರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!