ಉಡುಪಿ: ಗ್ರಾಮ ಪಂಚಾಯತ್ 80 ಬಡಗಬೆಟ್ಟು, ಕ್ಷಯ ರೋಗ ನಿರ್ಮೂಲನ ಕೇಂದ್ರ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು, 80 ಬಡಗಬೆಟ್ಟು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕ್ಷಯ ಮುಕ್ತ ಗ್ರಾಮ ಅಭಿಯಾನ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಆಚಾರ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ವೈದ್ಯಾಧಿಕಾರಿಗಳಾದ ಡಾ. ನರಸಿಂಹ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಡುಪಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ವಾಸುದೇವ ಉಪಾಧ್ಯಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್ ಮಾತನಾಡಿ, ಕ್ಷಯ ರೋಗ ನಿರ್ಮೂಲನೆಯಲ್ಲಿ ಯಾವ ರೀತಿಯಾಗಿ ಸಾಗಿದರೆ ಒಳಿತು ಎನ್ನುವುದನ್ನು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕದ ತಾಲೂಕು ಮೇಲ್ವಿಚಾರಕರಾದ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ಸಂಪೂರ್ಣ ಮಾಹಿತಿ ನೀಡಿದರು. ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯರು, ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು. ಸಮುದಾಯ ಆರೋಗ್ಯ ಅಧಿಕಾರಿಗಳಾದ ಅಕ್ಷತಾ ಸ್ವಾಗತಿಸಿ, ಶ್ವೇತಾ ವಂದಿಸಿದರು. ಕೇಶವ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.