ನವದೆಹಲಿ: ಟೀಮ್ ಇಂಡಿಯಾ ಸ್ಟಾರ್ ಆಟಗಾರ ರಿಷಭ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ರಿಷಭ್ ಪಂತ್ ಅವರಿಗೆ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.
ರಿಷಭ್ ಪಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್ ಹೇಳಿದ್ದಾರೆ. ರಿಷಭ್ ಅವರ ಕಾರು ರೈಲಿಂಗ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಭೀಕರತೆಯಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಶುಕ್ರವಾರ ಬೆಳಿಗ್ಗೆ, ದೆಹಲಿಯಿಂದ ರೂರ್ಕಿಗೆ ರಿಷಭ್ ಪಂತ್ ಕಾರಿನಲ್ಲಿ ಬರುತ್ತಿದ್ದರು. ಇದೇ ಸಂದರ್ಭದಲ್ಲಿ ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.