Friday, September 20, 2024
Friday, September 20, 2024

ಉಡುಪಿ- ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

ಉಡುಪಿ- ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

Date:

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆ ಹಾಗೂ ಇತರೆ ಸಮಾರಂಭಗಳಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಹೊಸ ವರ್ಷಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31 ರಿಂದ ಜನವರಿ 2 ರ ವರೆಗೆ ಆಚರಿಸಲಾಗುವ ಎಲ್ಲಾ ಸಮಾರಂಭಗಳನ್ನು ಮಧ್ಯರಾತ್ರಿ 1 ಗಂಟೆಯ ಒಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು. ದೊಡ್ಡ ಪ್ರಮಾಣದಲ್ಲಿ ನಡೆಸುವ ಸಮಾರಂಭಗಳನ್ನು ಕಡ್ಡಾಯವಾಗಿ ಹೊರಾಂಗಣದಲ್ಲಿ ಬೆಳಗ್ಗಿನ ಹೊತ್ತಿನಲ್ಲಿ ನಡೆಸಬೇಕು. ಸಾಧ್ಯವಾದಷ್ಟು ಮುಂಜಾನೆ ಹಾಗೂ ತಡರಾತ್ರಿಯ ಸಮಯದಲ್ಲಿ ಆಚರಣೆ ಮಾಡುವುದನ್ನು ತಪ್ಪಿಸಬೇಕು.

ಸಾರ್ವಜನಿಕರು ಸೇರುವ ಪ್ರದೇಶ ಅಥವಾ ಸ್ಥಳಗಳಲ್ಲಿ ಮುಖ್ಯವಾಗಿ ಒಳಾಂಗಣ ಪ್ರದೇಶ/ ಸ್ಥಳಗಳಾದ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾಟ್ಸ್, ಪಬ್, ಕ್ಲಬ್ ಮುಂತಾದವುಗಳಲ್ಲಿ ಆಸನ ಸಾಮರ್ಥ್ಯ ಮೀರದಂತೆ ಸಂಬಂAಧಪಟ್ಟ ಮಾಲೀಕರು ಹಾಗೂ ವ್ಯವಸ್ಥಾಪಕರುಗಳು ಕ್ರಮ ವಹಿಸಬೇಕು.

ಎಲ್ಲಾ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣ, ಪ್ರಾರ್ಥನಾ/ ಪೂಜಾ ಮಂದಿರ, ದೇವಸ್ಥಾನ, ಅಂಗಡಿ ಮುಂಗಟ್ಟುಗಳು, ಕೈಗಾರಿಕೆ ಹಾಗೂ ಇತರೆ ಕಾರ್ಖಾನೆಗಳು ಇತ್ಯಾದಿ ಪ್ರದೇಶಗಳಲ್ಲಿ ಮುಖಗವಸನ್ನು ಧರಿಸುವುದು ಹಾಗೂ ಸ್ಯಾನಿಟೈಸರ್ ಅನ್ನು ಬಳಕೆ ಮಾಡುವುದು ಕಡ್ಡಾಯ.

ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹಾಗೂ ಇತ್ಯಾದಿ ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡುಬAದಲ್ಲಿ ಸ್ವಯಂ ಪ್ರೇರಿತರಾಗಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವಯಸ್ಕರು, ಅನಾರೋಗ್ಯದಿಂದ ಬಳಲುತ್ತಿರುವವರು, ಗರ್ಭಿಣಿಯರು ಮತ್ತು ಬಾಣಂತಿಯರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದರಿಂದ ದೂರವಿರಬೇಕು.

ಸಮಾರಂಭಗಳು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾಟ್ಸ್, ಪಬ್, ಕ್ಲಬ್ ಮತ್ತು ಇತ್ಯಾದಿಗಳ ಆಯೋಜಕರು, ವ್ಯವಸ್ಥಾಪಕರು ಹಾಗೂ ಸೇವಾ ಸಿಬ್ಬಂದಿಗಳು ಆದ್ಯತೆಯ ಮೇಲೆ ಬೂಸ್ಟರ್ ಡೋಸ್ ಅನ್ನು ಪಡೆಯಬೇಕು. ಕನಿಷ್ಠ ಎರಡು ಡೋಸ್ ಲಸಿಕೆಗಳನ್ನು ಪಡೆದಿರಬೇಕು. ಈ ಮೇಲ್ಕಂಡ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ಸೇರುವುದನ್ನು ತಪ್ಪಿಸಲು ಒಂದಕ್ಕಿಂತ ಹೆಚ್ಚಿನ ಪ್ರವೇಶ ದ್ವಾರಗಳನ್ನು ನಿರ್ಮಿಸಬೇಕು.

ಒಳಾಂಗಣ ಪ್ರದೇಶಗಳಲ್ಲಿ ಸಮಾರಂಭಗಳು ನಡೆಯುವ ಎಲ್ಲಾ ಸಂದರ್ಭಗಳಲ್ಲೂ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಪ್ರವೇಶ ದ್ವಾರದಲ್ಲಿ ಮಾಸ್ಕ್ ಇಲ್ಲದೇ ಪ್ರವೇಶ ಇಲ್ಲ ಎಂಬ ಫಲಕವನ್ನು ಪ್ರದರ್ಶಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಒಳಾಂಗಣ ಸಮಾರಂಭಗಳಲ್ಲಿ ಪ್ರತಿಯೊಬ್ಬರೂ ಹ್ಯಾಂಡ್ ಸ್ಯಾನಿಟೈಸರ್ ಬಳಸಲು ಅರಿವು ಮೂಡಿಸಬೇಕು.

ಬಹುದೊಡ್ಡ ಸಮಾರಂಭಗಳನ್ನು ನಡೆಸಲು ಉದ್ದೇಶಿಸಿರುವ ಆಯೋಜಕರು ಸಮಾರಂಭಗಳಲ್ಲಿ ಭಾಗವಹಿಸುವಂತಹ ವ್ಯಕ್ತಿಯು ಅಸ್ವಸ್ಥಗೊಂಡಲ್ಲಿ ಅಂತಹವರನ್ನು ಹತ್ತಿರದ ವಿಶೇಷ ಸೌಲಭ್ಯವುಳ್ಳ ಆಸ್ಪತ್ರೆಗೆ ಆಂಬುಲೆನ್ಸ್ ಸೇವೆಯ ಮೂಲಕ ದಾಖಲಿಸಲು ಮುಂಚಿತವಾಗಿ ವ್ಯವಸ್ಥೆ ಮಾಡಿಕೊಂಡಿರಬೇಕು.

ಸಿನಿಮಾ ಮಂದಿರಗಳಲ್ಲಿ ಚಲನಚಿತ್ರ ವೀಕ್ಷಿಸಲು ಬರುವ ಪ್ರತಿಯೊಬ್ಬ ಪ್ರೇಕ್ಷಕರು ಎನ್-95 ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಈ ಕುರಿತು ಪ್ರವೇಶ ದ್ವಾರದಲ್ಲಿರುವ ಸಿಬ್ಬಂದಿಗಳು ಪ್ರೇಕ್ಷಕರಿಗೆ ತಿಳಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!