ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ನವೀಕೃತ ಶಿಶು ಪಾಲನಾ ಕೆಂದ್ರವನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ ಎಸ್., ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.