ಮುಂಬೈ: ಡಿಸೆಂಬರ್ 30 ರಂದು ಕ್ರಿಕೆಟಿಗ ರಿಷಬ್ ಪಂತ್ ದೆಹಲಿಯಿಂದ ರೂರ್ಖಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದರು. ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಿಂದ ಮುಂಬೈಯಲ್ಲಿರುವ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು. ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ. ದಿನಷಾ ಪರ್ದಿವಾಲಾ ಮತ್ತು ತಂಡ ರಿಷಬ್ ಪಂತ್ ಆರೋಗ್ಯದ ಮೇಲೆ ನಿಗಾ ವಹಿಸುತ್ತಿದ್ದಾರೆ. ರಿಷಬ್ ಪಂತ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ರಿಷಬ್ ಪಂತ್ ಅವರಿಗೆ ಇನ್ನೂ 8 ರಿಂದ 9 ತಿಂಗಳ ಕಾಲ ವಿಶ್ರಾಂತಿಯ ಆಗತ್ಯವಿದ್ದು, ಬಳಿಕವಷ್ಟೇ ಫಿಟ್ನೆಸ್ ಕಾಯ್ದುಕೊಳ್ಳಲು ತಯಾರಿ ನಡೆಸುವ ಸಾಧ್ಯತೆಯಿದೆ. ಈ ಬಾರಿಯ ಐಪಿಎಲ್, ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್ ನಲ್ಲಿಯೂ ರಿಷಬ್ ಪಂತ್ ಹೊರಗುಳಿಯಲಿದ್ದಾರೆ.