ನವದೆಹಲಿ: ಬೀದಿ ಬದಿ ವ್ಯಾಪಾರಿಗಳಿಗೆ ರೂ. 5,000 ಕಿರು ಸಾಲ ಸೌಲಭ್ಯವನ್ನು ಒದಗಿಸಲು ಕೇಂದ್ರ ಸರ್ಕಾರವು ಒತ್ತು ನೀಡಲಿದೆ ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
‘2023ರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ 3 ಸಾವಿರದಿಂದ 5 ಸಾವಿರ ರೂ.ವರೆಗಿನ ಕಿರುಸಾಲ ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆಯ ಅಡಿಯಲ್ಲಿ ಸಣ್ಣ ಉದ್ಯಮಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ (ಸ್ವಾನಿಧಿ) ಯೋಜನೆಯನ್ನು ಜೂನ್ 2020ರಲ್ಲಿ ಪ್ರಾರಂಭಿಸಲಾಯಿತು.