ಉಡುಪಿ: ಪಕ್ಷದ ಪ್ರಮುಖ ನಾಯಕರನ್ನು ಒಳಗೊಂಡು ಬಸ್ ಯಾತ್ರೆಯು ಜನವರಿ 11 ರಂದು ಬೆಳಗಾವಿಯಿಂದ ಪ್ರಾರಂಭಗೊಂಡು ಜನವರಿ 22ರಂದು ಉಡುಪಿ ಜಿಲ್ಲೆಗೆ ಆಗಮಿಸಲಿರುವುದು. ಆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಏರ್ಪಡಿಸುವ ಬಗ್ಗೆ ನಿರ್ಧರಿಸಲಾಗಿದೆ. ಚುನಾವಣೆ ಪೂರ್ವ ತಯಾರಿಗೆ ಪೂರಕವಾಗಿ ನಡೆಯುವ ಈ ಬಸ್ ಯಾತ್ರೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಸಾಂಪ್ರದಾಯಿಕ ಮತದಾರರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನದೊಂದಿಗೆ ಪ್ರತಿ ಗ್ರಾಮದ ಜನತೆಯು ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಕಾರ್ಯಕರ್ತರು ಪ್ರಯತ್ನಿಸಬೇಕು. ಈ ಸಮಾವೇಶವನ್ನು ಯಶಸ್ವಿಗೊಳಿಸಲು ಮುಂದಿನ ಚುನಾವಣೆಯಲ್ಲಿ ಸ್ವರ್ಧಿಸಲು ಇಚ್ಚಿಸಿರುವ ಅಕಾಂಕ್ಷೆಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದರು.
ಅವರು ಜಿಲ್ಲಾ ಕಾಂಗ್ರೇಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು. ಬಿಜೆಪಿ ಸರಕಾರದ ಜನ ವಿರೋಧಿ ನೀತಿಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಚರಿಸುವ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆಯು ಜನವರಿ 22ರಂದು ಉಡುಪಿ ಜಿಲ್ಲೆಗೆ ಆಗಮಿಸಲಿರುವುದು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರೂ ಸೇರಿದಂತೆ ಪಕ್ಷದ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತನದ್ದಾಗಿದೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ .ಗಫೂರ್, ಕಾರ್ಕಳ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ, ದಿನೇಶ್ ಪುತ್ರನ್, ರಾಜು ಪೂಜಾರಿ ಸಮಾವೇಶದ ಯಶಸ್ವಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಇತ್ತೀಚೆಗೆ ನಿಧನರಾದ ಪಕ್ಷದ ಮುಖಂಡರಿಗೆ ಸಹಕಾರಿ ಕಾಂಗ್ರೆಸ್ನ ಅಧ್ಯಕ್ಷರಾದ ಅಣ್ಣಯ್ಯ ಸೇರಿಗಾರ್ ನುಡಿ ನಮನ ಸಲ್ಲಿಸಿದರು.
ಸಭೆಯಲ್ಲಿ ನೀರೆ ಕೃಷ್ಣ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ದೇವಕಿ ಸಣ್ಣಯ್ಯ, ಸರಸು ಬಂಗೇರ, ಮುರಲಿ ಶೆಟ್ಟಿ, ಅಬ್ದುಲ್ ಅಜೀಜ್, ಪ್ರಖ್ಯಾತ ಶೆಟ್ಟಿ, ಶಬ್ಬಿರ್ ಅಹ್ಮದ್, ಮಂಜುನಾಥ ಪೂಜಾರಿ, ಬಿ.ನರಸಿಂಹ ಮೂರ್ತಿ, ದಿನಕರ್ ಹೇರೂರು, ಸದಾಶಿವ ದೇವಾಡಿಗ, ಹರಿಪ್ರಸಾದ್ ಶೆಟ್ಟಿ, ಮದನ್ ಕುಮಾರ್, ರಮೇಶ್ ಕಾಂಚನ್, ಶಂಕರ್ ಕುಂದರ್, ವಾಸುದೇವ ಯಡಿಯಾಳ, ಸಂತೋಷ್ ಕುಲಾಲ್, ರೋಶನ್ ಶೆಟ್ಟಿ, ಹರೀಶ್ ಶೆಟ್ಟಿ, ಪಾಂಗಾಳ, ಅಮೃತ ಶೆಣೈ, ಕಿಶನ್ ಹೆಗ್ಡೆ, ಕೊಳ್ಕೆಬೈಲ್, ಡಾ. ಸುನಿತಾ ಶೆಟ್ಟಿ, ರೋಶನಿ ಒಲಿವರಾ, ಹರೀಶ್ ಕಿಣಿ, ಉದ್ಯಾವರ ನಾಗೇಶ್ ಕುಮಾರ್, ಜಯಕುಮಾರ್, ಪ್ರಸಾದ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಸೌರಭ ಬಲ್ಲಾಳ್, ಕಿಶೋರ್ ಕುಮಾರ್ ಎರ್ಮಾಳ್, ಸುರೇಂದ್ರ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ಪ್ರಶಾಂತ ಜತ್ತನ್ನ, ಸುನಿಲ್ ಬಂಗೇರ, ಹಮೀದ್, ಜಯರಾಮ ನಾಯ್ಕ, ಕೇಶವ ಕೋಟ್ಯಾನ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕುಶಲ ಶೆಟ್ಟಿ ಸ್ವಾಗತಿಸಿ, ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು.