Wednesday, November 13, 2024
Wednesday, November 13, 2024

ಅಮೃತ ಜ್ಯೋತಿ ಯೋಜನೆ – ಮೆಸ್ಕಾಂನಿಂದ ಮಾಸಿಕ 75 ಯೂನಿಟ್‌ವರೆಗೆ ಉಚಿತ ವಿದ್ಯುತ್

ಅಮೃತ ಜ್ಯೋತಿ ಯೋಜನೆ – ಮೆಸ್ಕಾಂನಿಂದ ಮಾಸಿಕ 75 ಯೂನಿಟ್‌ವರೆಗೆ ಉಚಿತ ವಿದ್ಯುತ್

Date:

ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್) ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರ ಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ಅಮೃತ ಜ್ಯೋತಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಈ ಯೋಜನೆಯ ಅನುಷ್ಠಾನದ ಬಗ್ಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯ ಪ್ರಗತಿಯಲ್ಲಿದ್ದು, ಫಲಾನುಭವಿಗಳಿಗೆ ಮಾಸಿಕ 75 ಯೂನಿಟ್‌ವರೆಗೆ ಮಾತ್ರ ಬಳಕೆಯ ವಿದ್ಯುತ್ ಶುಲ್ಕದ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ಮರುಪಾವತಿಸಲಾಗುವುದು. ಈ ಪ್ರವರ್ಗದ ವಿದ್ಯುತ್ ಸ್ಥಾವರಗಳಿಗೆ ಮಾಪಕ (ಮೀಟರ್) ಅಳವಡಿಕೆ ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಬಿ.ಪಿ.ಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರದ ದೃಢೀಕೃತ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು.

ಈ ಸೌಲಭ್ಯಕ್ಕೆ ಅರ್ಹರಾಗುವ ವಿದ್ಯುತ್ ಗ್ರಾಹಕರು ಮಾಸಿಕ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ ಸದರಿ ಗ್ರಾಹಕರುಗಳಿಗೆ ಯೋಜನೆಯಡಿ ಸರ್ಕಾರದ ಸಹಾಯಧನವನ್ನು ಮರು ಪಾವತಿಸಲಾಗುವುದು.

ಗ್ರಾಹಕರು ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಬ್ಯಾಂಕ್ ಖಾತೆಯ ಸಂಖ್ಯೆ ಹಾಗೂ ಇತರೆ ಮಾಹಿತಿಗಳನ್ನು ಒದಗಿಸಬೇಕು. ಗ್ರಾಹಕರು 2022 ರ ಏಪ್ರಿಲ್ 30 ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದ್ದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ ಸಮೀಪದ ಮೆಸ್ಕಾಂ ಉಪವಿಭಾಗ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!