ಕುಂದಾಪುರ: ಬರಿಗಣ್ಣಿಗೆ ಕಾಣುವ ಶೇ. 5 ಜೊತೆಗೆ ಬರಿಗಣ್ಣಿಗೆ ಕಾಣದ ಶೇ. 95 ಪ್ರತಿಶತವೇ ವಿಜ್ಞಾನ. ವಿಜ್ಞಾನ ತುಂಬಾ ಸರಳವಾದದ್ದು. ಏಕೆ? ಹೇಗೆ? ಎಂದು ಪ್ರಶ್ನಿಸುವುದೇ ವಿಜ್ಞಾನ ಎಂದು ಬೆಂಗಳೂರಿನ ಪ್ರಸಿದ್ಧ ಕೃಷಿ ವಿಜ್ಞಾನಿ ಡಾ. ಚನ್ನೇಶ್ ಹೇಳಿದರು.
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಗೆ ವಿಜ್ಞಾನಿ ಡಾ. ಚನ್ನೇಶ್ ಗುರುವಾರ ಭೇಟಿ ನೀಡಿ ಮಾತನಾಡಿದರು. ಸಂಸ್ಥೆಯ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವದ ಬಗ್ಗೆ ವಿವರಿಸುತ್ತಾ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಿಜ್ಞಾನಿಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ಸ್ವಪ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.