Thursday, September 19, 2024
Thursday, September 19, 2024

ತೆಂಕನಿಡಿಯೂರು ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

Date:

ಮಲ್ಪೆ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರು ಹಾಗೂ ನಿವೃತ್ತ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರು ಮಾತನಾಡಿ, ಎನ್.ಎಸ್.ಎಸ್. ನಿಂದ ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯ, ಮೌಲ್ಯ ಮತ್ತು ವ್ಯಕ್ತಿತ್ವ ವಿಕಸನ ಹೊಂದಲು ಸಹಕಾರಿಯಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಕೊಳ್ಳುವ ವಿದ್ಯಾರ್ಥಿಯು ಭವಿಷ್ಯದ ಜೀವನದಲ್ಲಿ ಯಶಸ್ವಿಯಾಗಬಲ್ಲ. ಆದುದರಿಂದ ಎಲ್ಲಾ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ-2 ರ ಯೋಜನಾಧಿಕಾರಿ ಡಾ. ಮಹೇಶ ಕುಮಾರ್ ಕೆ.ಇ. ಪ್ರಾಸ್ತಾವಿಕ ಮಾತುಗಳನ್ನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕ- 1ರ ಯೋಜನಾಧಿಕಾರಿ ಸುಷ್ಮಾ ಟಿ. ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್. ಪ್ರತಿಜ್ಞೆಯನ್ನು ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಎನ್.ಎನ್.ಎಸ್. ವಿದ್ಯಾರ್ಥಿ ನಾಯಕರುಗಳಾದ ಗೌತಮಿ ಜಿ. ಸುವರ್ಣ ಸ್ವಾಗತಿಸಿ, ಶ್ರಾವ್ಯಾ ಎ ವಂದಿಸಿದರು. ಶ್ರದ್ಧಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!