ಉಡುಪಿ: ಉಡುಪಿ ನಗರಸಭೆಯ ಅಂಬಲಪಾಡಿ ವಾರ್ಡಿನ ಉದ್ಯಾನವನ ಅಭಿವೃದ್ಧಿಗೆ 2022-23 ನೇ ಸಾಲಿನ 15ನೇ ಹಣಕಾಸು ಆಯೋಗದಡಿ ರೂ. 32 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.