ಮಲ್ಪೆ: ಹಲವು ವರ್ಷಗಳಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ವಿವಿಧ ವೇಷಗಳನ್ನು ಧರಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ದೇಣಿಗೆ ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡಿ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿಯವರನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಯಲಾಯಿತು.
ಮಣಿಪಾಲ ಗ್ರೂಫ್ ಇದರ ಚೇರ್ಮೆನ್ ಸುಧಾಕರ ಪೈ, ಸಮಾಜ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಯಾನಂದ ಶೆಟ್ಟಿ ಕೊಜಕುಳಿ, ಕರ್ನಾಟಕ ರಾಜ್ಯ ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ವಲಯಾಧ್ಯಕ್ಷರಾದ ಪ್ರೊ. ಸುರೇಶ್ ರೈ ಕೆ. ಇವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಾಕೃಷ್ಣ, ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್, ಸಾಂಸ್ಕೃತಿಕ ಸಂಚಾಲಕರಾದ ಡಾ. ರಾಘವ ನಾಯ್ಕ, ಪದವಿ ವಿಭಾಗದ ಸಾಂಸ್ಕೃತಿಕ ಸಂಚಾಲಕರಾದ ಕೃಷ್ಣ, ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಪ್ರತಿನಿಧಿಗಳಾದ ಸ್ಪಂದನಾ ಮಯ್ಯ, ಯಮುನಪ್ಪ, ಸೋಮನಾಥ, ರಕ್ಷಿತಾ, ದಿಶಾ ಜಿ.ಸಿ., ಅನ್ವಿತಾ ಜಿ.ವಿ., ಮಹೇಶ್, ಸುಹಾಸ್, ಅಕ್ಷಯ್, ಸೌಂದರ್ಯ ಕೆ., ಪ್ರಣೀತ್, ಸುಷ್ಮಾ ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.