Friday, September 20, 2024
Friday, September 20, 2024

ಜ.15- ನೀಲಾವರದಲ್ಲಿ ಚೈತನ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಜ.15- ನೀಲಾವರದಲ್ಲಿ ಚೈತನ್ಯ ಪ್ರಶಸ್ತಿ ಪ್ರದಾನ ಸಮಾರಂಭ

Date:

ಬ್ರಹ್ಮಾವರ: ಜನವರಿ 15 ಭಾನುವಾರ ಸಂಜೆ 7 ಗಂಟೆಯಿಂದ ನೀಲಾವರ ರಥಬೀದಿಯಲ್ಲಿ ಚೈತನ್ಯ ಯುವಕ ಮಂಡಲದ ವಾರ್ಷಿಕೋತ್ಸವ ಹಾಗೂ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿದ್ದು ಎಸ್. ಎಸ್.ಎಲ್.ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಗಳಿಸಿದವರಿಗೆ ವರ್ಷಂಪ್ರತಿ ನೀಡುವ ಚೈತ್ಯನ್ಯ ಪ್ರಶಸ್ತಿಯನ್ನು ಧನುಶ್ರೀ ಇವರಿಗೆ ಪ್ರದಾನ ಮಾಡಲಾಗುವುದು.

ಮನೋರಂಜನೆಗಾಗಿ ಬೃಹತ್ ಎಲ್.ಇ.ಡಿ ಪರದೆಯ ಮೇಲೆ ಕಾಂತಾರ ಸಿನಿಮಾ ಪ್ರದರ್ಶನ ಮಾಡಲಾಗುವುದು.
ನೀಲಾವರ ದೇವಳದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾದ ರಘುರಾಮ ಮಧ್ಯಸ್ಥ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ನೀಲಾವರ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಚೈತನ್ಯ ಯುವಕ ಮಂಡಲದ ಗೌರವಾಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್, ಅಧ್ಯಕ್ಷ ಶ್ಯಾಮರಾಯ ಆಚಾರ್ಯ, ಕಾರ್ಯದರ್ಶಿ ಹರೀಶ ಆಚಾರ್ಯ, ಸಾಂಸ್ಕೃತಿಕ ಸಂಘಟಕ ಪುರುಷೋತ್ತಮ ಆಚಾರ್ಯ, ಖಜಾ0ಚಿ ಮಧುಸೂದನ್ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಕರುಣಾಕರ ರಾವ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿರುವರು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!