Thursday, September 19, 2024
Thursday, September 19, 2024

ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ಉಡುಪಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪನೆ

ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ಉಡುಪಿ ಕೃಷ್ಣನ ಉತ್ಸವ ಮೂರ್ತಿ ಪ್ರತಿಷ್ಠಾಪನೆ

Date:

ಉಡುಪಿ: ತಮ್ಮ ನಾಲ್ಕನೇ ಐತಿಹಾಸಿಕ ಶ್ರೀ ಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿಯಾಗಿ ವಿಶ್ವ ಪರ್ಯಟನೆ ನಡೆಸುತ್ತಿರುವ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು 2015 ರಲ್ಲಿ ಮೆಲ್ಬರ್ನ್ ನಲ್ಲಿ ಸ್ಥಾಪಿಸಿದ ಪುತ್ತಿಗೆ ಮಠದ ಶ್ರೀ ವೆಂಕಟ ವೃಂದಾವನದಲ್ಲಿ ಜನವರಿ 15 ಮಕರ ಸಂಕ್ರಮಣದ ಶುಭ ಮುಹೂರ್ತದಂದು ಉಡುಪಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿದರು.

ಮಠದ ವಿದ್ವಾಂಸರು, ವೈದಿಕರು ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿಕೊಟ್ಟರು.

ಈ ದಿನವು ಎಷ್ಟು ವಿಶೇಷವಾಗಿತ್ತೆಂದರೆ 750 ವರ್ಷಗಳ ಹಿಂದೆ ಶ್ರೀ ಜಗದ್ಗುರು ಮಧ್ವಾಚಾರ್ಯರು ಶ್ರೀ ಕೃಷ್ಣನನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿದ ದಿನ ಇದೆ ಮಕರ ಸಂಕ್ರಮಣದ ಪರ್ವಕಾಲವಾಗಿತ್ತು. ಅಂದು ಮಕರ ಸಂಕ್ರಮಣದ ಪರ್ವಕಾಲದಲ್ಲಿ ಆಚಾರ್ಯ ಮಧ್ವರು ದ್ವಾರಕೆಯಿಂದ ಕಡಲು ದಾಟಿ ಬಂದ ಕೃಷ್ಣನನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು. ಇಂದು ಮಧ್ವ ಪರಂಪರೆಯ ಶಿಷ್ಯರು, ಭಾವಿ ಪರ್ಯಾಯ ಪೀಠಾಧಿಪತಿಗಳೂ ಅದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣನ ಉತ್ಸವ ಮೂರ್ತಿಯನ್ನು ಕಡಲಾಚೆಯ ಮೆಲ್ಬರ್ನ್ ಮಹಾನಗರದಲ್ಲಿ, ಅದೇ ಮಕರ ಸಂಕ್ರಮಣದ ಪರ್ವಕಾಲದಲ್ಲಿ ಪ್ರತಿಷ್ಠಾಪಿಸಿದ್ದು, ಇದು ಇತಿಹಾಸ ಮರುಕಳಿಸಿದ ಅಪೂರ್ವ ಕ್ಷಣವಾಗಿ, ಈ ಐತಿಹಾಸಿಕ ಕ್ಷಣವನ್ನು ಮೆಲ್ಬೋರ್ನ್‌ನಲ್ಲಿರುವ ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಪ್ರತಿಷ್ಠೆಯ ಪೂರ್ವಭಾವಿಯಾಗಿ ಕೃಷ್ಣನ ವಿಗ್ರಹವನ್ನು ಪಲ್ಲಕ್ಕಿಯಲ್ಲಿ ತಂದು, ಬಿಂಬಶುದ್ಧಿ, ವಾಸ್ತು ಹೋಮ, ಅಧಿವಾಸ ಪೂಜೆ ಇತ್ಯಾದಿಗಳನ್ನು ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!