ಮಂಗಳೂರು: ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇಲ್ಲಿ ರಾಷ್ಟ್ರೀಯ ಗಣಿತ ದಿನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಜಿ. ಡಿ. ಕಾಮತ್ ಗಣಿತದ ಮಹತ್ವವನ್ನು ತಿಳಿಸಿ, ಗಣಿತ ಎಂಬುವುದು ಕೇವಲ ಸೂತ್ರಗಳು, ಪ್ರಮೇಯಗಳನ್ನು ತಿಳಿದುಕೊಳ್ಳುವುದು ಮಾತ್ರ ಅಲ್ಲ, ನಮ್ಮ ದಿನನಿತ್ಯದ ಕಾರ್ಯದಲ್ಲಿ ಗಣಿತದ ಪಾತ್ರ ಬಹಳಷ್ಟಿದೆ ಎಂದರು. ರಾಮಾನುಜನ್ ರವರ ಹಲವು ಮೂಲಸೂತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು. ಗಣಿತ ದಿನದ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ರಾಸಾಯನಶಾಸ್ತ್ರ ವಿಭಾಗದ ಮಖ್ಯಸ್ಥರಾದ ಡಾ. ಸುಧಾಕರನ್ ಟಿ., ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಸಂತಿ ಪಿ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣಪ್ರಭಾ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಕೆ.ಬಿ., ಮತ್ತು ಪ್ರೊ. ಜೆಫ್ರಿ ರಾಡ್ರಿಗಸ್ ಉಪಸ್ಥಿತರಿದ್ದರು.