Thursday, September 19, 2024
Thursday, September 19, 2024

ಉಡುಪಿ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

ಉಡುಪಿ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

Date:

ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 18 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ, ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ.

2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಪಡೆದು 26 ವಾರ (6 ತಿಂಗಳು) ಪೂರೈಸಿದವರು ಕೋವಿಡ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ನೀಡಲಾಗುವುದು. ಕೋವಿಶೀಲ್ಡ್ ಮುನ್ನೆಚ್ಚರಿಕಾ ಡೋಸ್ ಲಸಿಕೆಯು ಮಧ್ಯಾಹ್ನ 12 ರ ನಂತರ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಸಾರ್ವಜನಿಕರು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ, ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!