ನವದೆಹಲಿ: ಜೆ.ಪಿ. ನಡ್ಡಾ ಅವರು ಜೂನ್ 2024 ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಂಗಳವಾರ ನವದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ನಡ್ಡಾ ಅವರು ಜೂನ್ 2019 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.