Monday, November 25, 2024
Monday, November 25, 2024

ಪ್ರಜಾಧ್ವನಿ ಸಮಾವೇಶ- ಪೂರ್ವಭಾವಿ ಸಭೆ

ಪ್ರಜಾಧ್ವನಿ ಸಮಾವೇಶ- ಪೂರ್ವಭಾವಿ ಸಭೆ

Date:

ಉಡುಪಿ: ಚುನಾವಣಾ ಸಂದರ್ಭ ಸಮಾವೇಶಗಳಲ್ಲಿ ಜನರ ಭಾಗವಹಿಸುವಿಕೆಯೇ ಮುಂದೆ ಅಲೆಯಾಗಿ ಮಾರ್ಪಾಡು ಆಗುತ್ತದೆ. ಈಗಾಗಲೇ ಮಾಧ್ಯಮಗಳ ಸರ್ವೆ ವರದಿಗಳು ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿದ್ದು ಪಕ್ಷವು ನಿಶ್ಚಲ ಬಹುಮತ ಗಳಿಸುವುದರಲ್ಲಿ ಸಂಶಯವಿಲ್ಲ. ಪಕ್ಷವು ಈಗಾಗಲೇ ಆಯೋಜಿಸಿದ್ದ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿದ್ದು, ಅದರಂತೆ “ಪ್ರಜಾಧ್ವನಿ” ಸಮಾವೇಶವೂ ಯಶಸ್ವಿಯಾಗಲು ಎಲ್ಲಾ ಕಾರ್ಯಕರ್ತರು ಮುತುವರ್ಜಿ ವಹಿಸಬೇಕೆಂದು ಕಾರ್ಯದರ್ಶಿಗಳೂ, ಮೈಸೂರು ವಿಭಾಗದ ಉಸ್ತುವಾರಿಗಳಾಗಿರುವ ಶಾಸಕ ರೋಝಿ ಜೋನ್ ಹೇಳಿದರು.

ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದ ಪೂರ್ವಭಾವಿ ತಯಾರಿ ಸಭೆಯಲ್ಲಿ ಮಾತನಾಡುತ್ತಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷರು ಮೈಸೂರು ವಿಭಾಗದ ಉಸ್ತುವಾರಿಗಳೂ ಆದ ಆರ್.ಧ್ರುವ ನಾರಾಯಣ ಮಾತನಾಡುತ್ತಾ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ಜನ ತತ್ತಿರಿಸಿದ್ದಾರೆ. ಆದರೂ ಸರಕಾರ ಈ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಪ್ರತಿ ಕುಟುಂಬದ ಗೃಹಿಣಿ ಹೆಸರಲ್ಲಿ ಪ್ರತಿ ತಿಂಗಳು 2,000 ರೂಗಳಂತೆ ವರ್ಷಕ್ಕೆ 24 ಸಾವಿರ ರೂಪಾಯಿ ಆರ್ಥಿಕ ನೆರವು ಹಾಗೆಯೇ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಲಾಗಿದೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡುತ್ತಾ ಬಿಜೆಪಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಪ್ರಾರಂಭಿಸಿದೆ. ಆಡಳಿತಾರೂಢ ಬಿಜೆಪಿ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಮೂಲಕ ಕಾಂಗ್ರೆಸ್ ಪರ ಒಲವು ಮೂಡಿಸುವುದು ಯಾತ್ರೆಯ ಉದ್ದೇಶವಾಗಿದೆ. ಸಮಾವೇಶದ ಯಶಸ್ವಿಗಾಗಿ ಈಗಾಗಲೇ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ಚಿಕ್ಕಮಗಳೂರು ಮತ್ತು ಉಡುಪಿ ಕ್ಷೇತ್ರಗಳ ಉಸ್ತುವಾರಿಗಳಾದ ಪ್ರತಾಪನ್, ಅಖಿಲ ಭಾರತ ಮೀನುಗಾರ ಕಾಂಗ್ರೆಸಿನ ಅಧ್ಯಕ್ಷರಾದ ಆರ್ಮ್ ಸ್ಟ್ರಾಂಗ್ ಫೆರ್ನಾಂಡೀಸ್, ರಾಜ್ಯ ಮೀನುಗಾರ ಕಾಂಗ್ರೆಸಿನ ಅಧ್ಯಕ್ಷರಾದ ಮಂಜುನಾಥ್ ಸೋನೆಗಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ದಿನೇಶ್ ಪುತ್ರನ್, ಹರೀಶ್ ಕಿಣಿ ಉಪಸ್ಥಿತರಿದ್ದರು.

ಸಭೆಯಲ್ಲಿ ರಾಜು ಪೂಜಾರಿ, ನೀರೆಕೃಷ್ಣ ಶೆಟ್ಟಿ, ನವೀನ್‍ಚಂದ್ರ ಶೆಟ್ಟಿ, ಮಂಜುನಾಥ ಪೂಜಾರಿ, ಬಿ.ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಹಬೀಬ್ ಆಲಿ, ಅಬ್ದುಲ್ ಅಜೀಜ್, ಸದಾಶಿವ ದೇವಾಡಿಗ, ಹರಿಪ್ರಸಾದ ಶೆಟ್ಟಿ, ಬಿಪಿನ್ ಚಂದ್ರಪಾಲ್, ನವೀನಚಂದ್ರ ಸುವರ್ಣ, ದಿನಕರ ಹೇರೂರು, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ಕೀರ್ತಿ ಶೆಟ್ಟಿ, ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳು, ಅಮೃತ್ ಶೆಣೈ, ಡಾ. ಸುನಿತಾ ಶೆಟ್ಟಿ, ರೋಶನಿ ಒಲಿವರಾ, ದೀಪಕ್ ಕೋಟ್ಯಾನ್, ಜಯ ಕುಮಾರ್, ಪ್ರಶಾಂತ ಜತ್ತನ್ನ, ಉದ್ಯಾವರ ನಾಗೇಶ್ ಕುಮಾರ್, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಸೌರಭ್ ಬಲ್ಲಾಳ್ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿ ಪ್ರಸ್ತಾವನೆಗೈದರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!