ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು.
8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಎನ್‌ಟೈಟಲ್‌ಮೆಂಟ್ ಬೇಸಿಸ್ ಮೂಲಕ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಹಾಗೂ ಪಿ.ಯು.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವಿದ್ಯಾರ್ಥಿವೇತನ ಪಡೆಯಲು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತು ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.