Saturday, September 21, 2024
Saturday, September 21, 2024

ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ನೀಡಿರುವ ಆಧಾರ್ ವಿಶಿಷ್ಠ ಗುರುತಿನ ಚೀಟಿಯನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಗಳೂ ಮಾಡಿಸಿಕೊಳ್ಳಬೇಕು. ಈಗಾಗಲೇ ಆಧಾರ್ ಕಾರ್ಡ್ ನೊಂದಣಿಯನ್ನು 10 ವರ್ಷಗಳ ಹಿಂದೆ ಮಾಡಿಸಿದ್ದವರು ತಮ್ಮ ವಿಳಾಸ ಗುರುತಿನ ದಾಖಲೆಗಳನ್ನು ನೀಡುವುದರೊಂದಿಗೆ ಕಡ್ಡಾಯವಾಗಿ ನವೀಕರಣಗೊಳಿಸಿಕೊಳ್ಳಬೇಕು ಎಂದರು.

ಈಗಾಗಲೇ ಜಿಲ್ಲೆಯಲ್ಲಿ 5 ವರ್ಷದೊಳಗಿನ 42312 ಮಕ್ಕಳು ಆಧಾರ್ ನೊಂದಣಿ ಮಾಡಿಸಿಕೊಂಡಿದ್ದು, ಕೈ ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್ ಸೇರಿದಂತೆ ಮತ್ತಿತರ ಬಯೋಮೆಟ್ರಿಕ್ ನೀಡದೇ ಇರುವ ಪ್ರತಿಯೊಬ್ಬ ಆಧಾರ್ ನೊಂದಣಿ ಮಾಡಿಸಿಕೊಂಡಿರುವ ಮಕ್ಕಳು ಬಯೋಮೆಟ್ರಿಕ್ ನೀಡಬೇಕು ಎಂದರು.

ಜಿಲ್ಲೆಯಲ್ಲಿ 13 ಲಕ್ಷಕ್ಕೂ ಅಧಿಕ ಜನರು ಆಧಾರ್ ನೊಂದಣಿಯನ್ನು ಮಾಡಿಸಿಕೊಂಡಿದ್ದು, ಅದರಲ್ಲಿ 15 ವರ್ಷ ಮೇಲ್ಪಟ್ಟ 2 ಲಕ್ಷ ಜನರು ತಮ್ಮ ಮೊಬೈಲ್ ಸಂಖ್ಯೆ ಜೋಡಣೆಯನ್ನು ಮಾಡಿಸದೇ ಇದ್ದು ಅಂತಹವರು ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಪ್ರಮುಖ ಪಾತ್ರ ವಹಿಸುತ್ತಿದೆ. ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆ ಜೋಡಣೆ ಹೊಂದಿ, ಸರ್ಕಾರದ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ಗಳ ಖಾತೆಗೆ ವರ್ಗಾಯಿಸಲು ಸಹ ಸುಲಭವಾಗಲಿದೆ ಎಂದರು.

ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಆಧಾರ್ ಪ್ರಾಧಿಕಾರದ ಉಪನಿರ್ದೇಶಕ ರಾಘವೇಂದ್ರ ಎಸ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!