ಉಡುಪಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಇಂಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷೆಯನ್ನು ಎದುರಿಸುವಾಗ ಬರುವ ಒತ್ತಡಗಳ ನಿವಾರಣೆ’ ಕುರಿತಾಗಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕುಮಾರ್ ಕಾಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ನಿರ್ಭಯವಾಗಿ ಪರೀಕ್ಷೆಯನ್ನು ಎದುರಿಸುವ ಬಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಗುಣ ಆರ್ ಕೆ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕೆ. ರಾಮನಾಥ ನಾಯಕ್, ಕ್ಲಬ್ಬಿನ ಇಂಟರಾಕ್ಟ್ ಕೋ ಆರ್ಡಿನೇಟರ್ ವಿಷ್ಣುವರ್ಧನ್ ಪೂಜಾರಿ, ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರದ ಉಮೇಶ್ ಕರಣಿಕ್ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಸೇರುಗಾರ್ ಉಪಸ್ಥಿತರಿದ್ದರು.