ಮಂಗಳೂರು, ಜ. 28: ಡಾ. ಗಿರಿಧರ ರಾವ್ ಎಂ.ಎಸ್ ಇವರು ಕಾಲೇಜು ಶಿಕ್ಷಣ ಪ್ರಾದೇಶಿಕ ಕಚೇರಿ ಮಂಗಳೂರು ಇದರ ಜಂಟಿ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಕಾಪು, ವಿಟ್ಲ, ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಬೆಂಗಳೂರು, ಮೈಸೂರು ವಿಭಾಗಗಳಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿ ಎಂ.ಎಸ್.ಡಬ್ಲ್ಯೂ ಸಂಯೋಜಕರಾಗಿಯೂ ಇವರು ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.