ಉಡುಪಿ, ಜ.31: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕರಾವಳಿ ಭಾಗದ ಜನರು ಹಲವು ವರ್ಷಗಳಿಂದ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.